Verse

Menu:

ಪವಿತ್ರ ಬೈಬಲ್ : Kannada Bible (ßeta)  

Malayalam - മലയാളം Hindi - हिंदी Tamil - தமிழ் Kannada - ಕನ್ನಡ Telugu - తెలుగు 


Can't Read Kannada Words? Download Unicode Fonts.

Press CTRL + D To Bookmark This Page..:)

ಹಗ್ಗಾಯ: ಅಧ್ಯಾಯ 1

 
Custom Search

1. ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.

1. In the second year of King Darius, on the first day of the sixth month, the word of the LORD came through the prophet Haggai to Zerubbabel son of Shealtiel, governor of Judah, and to Joshua son of Jehozadak, the high priest:

2. ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.

2. This is what the LORD Almighty says: "These people say, 'The time has not yet come for the LORD's house to be built.'"

3. ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--

3. Then the word of the LORD came through the prophet Haggai:

4. ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?

4. "Is it a time for you yourselves to be living in your paneled houses, while this house remains a ruin?"

5. ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.

5. Now this is what the LORD Almighty says: "Give careful thought to your ways.

6. ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.

6. You have planted much, but have harvested little. You eat, but never have enough. You drink, but never have your fill. You put on clothes, but are not warm. You earn wages, only to put them in a purse with holes in it."

7. ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.

7. This is what the LORD Almighty says: "Give careful thought to your ways.

8. ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.

8. Go up into the mountains and bring down timber and build the house, so that I may take pleasure in it and be honored," says the LORD.

9. ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?

9. "You expected much, but see, it turned out to be little. What you brought home, I blew away. Why?" declares the LORD Almighty. "Because of my house, which remains a ruin, while each of you is busy with his own house.

10. ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.

10. Therefore, because of you the heavens have withheld their dew and the earth its crops.

11. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.

11. I called for a drought on the fields and the mountains, on the grain, the new wine, the oil and whatever the ground produces, on men and cattle, and on the labor of your hands."

12. ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.

12. Then Zerubbabel son of Shealtiel, Joshua son of Jehozadak, the high priest, and the whole remnant of the people obeyed the voice of the LORD their God and the message of the prophet Haggai, because the LORD their God had sent him. And the people feared the LORD.

13. ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.

13. Then Haggai, the LORD's messenger, gave this message of the LORD to the people: "I am with you," declares the LORD.

14. ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.

14. So the LORD stirred up the spirit of Zerubbabel son of Shealtiel, governor of Judah, and the spirit of Joshua son of Jehozadak, the high priest, and the spirit of the whole remnant of the people. They came and began to work on the house of the LORD Almighty, their God,

15. ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.

15. on the twenty-fourth day of the sixth month in the second year of King Darius.





Why do ads appear in this Website?

×